ಬೇಂದ್ರೆಯವರಿಗೆ ಅರವತ್ತು ವರ್ಷಗಳು ತುಂಬಿದ ಸಂದರ್ಭದಲ್ಲಿ ಅವರ ಐದು ಕವನಸಂಕಲನಗಳನ್ನು
ಕೂಡಿಸಿ “ಅರಳು-ಮರಳು” ಎನ್ನುವ ಬೃಹತ್-ಕವನಸಂಕಲನವನ್ನು ಪ್ರಕಟಿಸಲಾಯಿತು. ಆ ಐದು ಸಂಕಲನಗಳು ಇಂತಿವೆ:
(೧) ಸೂರ್ಯಪಾನ
(೨) ಹೃದಯಸಮುದ್ರ
(೩) ಮುಕ್ತಕಂಠ
(೪) ಚೈತ್ಯಾಲಯ
(೫) ಜೀವಲಹರಿ
ಹೃದಯಸಮುದ್ರ ಕವನಸಂಕಲನದ ಮೊದಲ ಕವನವೂ “ಹೃದಯಸಮುದ್ರ”ವೇ. ಈ ಕವನದ ಬಗೆಗೆ ಬೇಂದ್ರೆಯವರು ಈ ರೀತಿ ಟಿಪ್ಪಣಿ ನೀಡಿದ್ದಾರೆ: “ಶ್ರೀ ಅರವಿಂದರ ಅತಿಮಾನಸ ಸಾಕ್ಷಾತ್ಕಾರದಿಂದ ಬಂದ ಸಂಸಾರೋತ್ತಾರಕ ಕರೆಯನ್ನೇ ನೆನಿಸಿ ಈ ಭಾವಲಹರಿ ಉತ್ಕಟತೆಯನ್ನು ತಾಳಿದೆ.”
ಮನುಷ್ಯನು ಉತ್ಕ್ರಾಂತಿ ಪಥದಲ್ಲಿ ಮುಂದುವರೆಯುತ್ತಿದ್ದಾಗ ಕೊನೆಯ ಘಟ್ಟದಲ್ಲಿ ಅವನ ಪ್ರಜ್ಞೆಯು ‘ಸುಪ್ರಮಾನಸ’ ಅವಸ್ಥೆಯನ್ನು ತಲುಪುವದಾಗಿ ಶ್ರೀ ಅರವಿಂದರು ಹೇಳುತ್ತಿದ್ದರು. (ಸ್ವತಃ ಅವರು ಈ ಅವಸ್ಥೆಯನ್ನು ತಲುಪಿದ್ದರು).
ಲೌಕಿಕ ಪ್ರಜ್ಞೆಯಿಂದ ಅಲೌಕಿಕ ಪ್ರಜ್ಞೆಗೆ ಸಾಗಲು ಅವರು ನೀಡಿದ ಕರೆಯನ್ನು ಕವಿ ‘ಸಂಸಾರೋತ್ತಾರಕ ಕರೆ’ ಎಂದು ಕರೆದಿದ್ದಾರೆ. ಗುರುವಿನ ಕರೆಯ ಪ್ರಭಾವದಿಂದ ಕವಿಯಲ್ಲಿ ಭಾವವು ಉಮ್ಮಳಿಸಿದಾಗ, ಈ ಕವನ ಹೊರಹೊಮ್ಮಿದೆ.
‘ಹೃದಯಸಮುದ್ರ’ ಕವನದ ಪೂರ್ತಿಪಾಠ ಇಂತಿದೆ:
“ಬಂಗಾರ ನೀರ ಕಡಲಾಚೆಗೀಚೆಗಿದೆ ನೀಲ ನೀಲ ತೀರಾ,
ಮಿಂಚುಬಳಗ ತೆರೆತೆರೆಗಳಾಗಿ ಅಲೆಯುವದು ಪುಟ್ಟಪೂರಾ,
ಅದು ನಮ್ಮ ಊರು, ಇದು ನಿಮ್ಮ ಊರು, ತಂತಮ್ಮ ಊರೊ ಧೀರಾ,
ಅದರೊಳಗೆ ನಾವು, ನಮ್ಮೊಳಗೆ ತಾವು ಅದು ಇಲ್ಲವಣ್ಣ ದೂರಾ.
ಕರೆ ಬಂದಿತಣ್ಣ, ತೆರೆ ಬಂದಿತಣ್ಣ, ನೆರೆ ಬಂದಿತಣ್ಣ ಬಳಿಗೆ,
ಹರಿತsದ ಭಾವ, ಬೆರಿತsದ ಜೀವ ಅದರೊಳಗೆ ಒಳಗೆ ಒಳಗೆ.
ಇದೆ ಸಮಯವಣ್ಣ ಇದೆ ಸಮಯ ತಮ್ಮ ನಮ್‌ನಿಮ್ಮ ಆತ್ಮಗಳಿಗೆ.
ಅಂಬಿಗನು ಬಂದ, ನಂಬಿಗನು ಬಂದ ಬಂದsದ ದಿವ್ಯಗಳಿಗೆ.
ಇದು ಉಪ್ಪು ನೀರ ಕಡಲಲ್ಲೊ; ನಮ್ಮ ಒಡಲಲ್ಲೆ ಇದರ ನೆಲೆಯು.
ಕಂಡವರಿಗಲ್ಲೊ ಕಂಡವರಿಗಷ್ಟೆ ತಿಳಿದsದ ಇದರ ಬೆಲೆಯು.
ಸಿಕ್ಕಲ್ಲಿ ಅಲ್ಲ ಸಿಕ್ಕಲ್ಲಿ ಮಾತ್ರ ಒಡೆಯುವದು ಇದರ ಸೆಲೆಯು,
ಕಣ್ಣರಳಿದಾಗ ಕಣ್ ಹೊರಳಿದಾಗ ಹೊಳೆಯುವದು ಇದರ ಕಳೆಯು.
ಬಂದವರ ಬಳಿಗೆ ಬಂದsದ ಮತ್ತು ನಿಂದವರ ನೆರೆಗು
ಬಂದsದೋ ಬಂದsದ,
ನವಮನುವು ಬಂದ ಹೊಸ ದ್ವೀಪಗಳಿಗೆ ಹೊರಟಾನ ಬನ್ನಿ
ಅಂದsದೋ ಅಂದsದ.”
…………………………………………..
ಕವಿಯು ಆಧ್ಯಾತ್ಮ ಸಾಧಕನ ಹೃದಯವನ್ನೇ ಒಂದು ಸಮುದ್ರಕ್ಕೆ ಹೋಲಿಸಿ ಕವನವನ್ನು ಪ್ರಾರಂಭಿಸಿದ್ದಾರೆ.
ಆದರೆ ಈ ಸಮುದ್ರವು ಸದ್-ಭಾವನೆಗಳಿಂದ ತುಂಬಿದ ಹೃದಯಸಮುದ್ರ. ಅಂತೆಯೇ ಇದು ಬಂಗಾರ ನೀರಿನ ಸಮುದ್ರ.

ಅದರೊಳಗೆ ನಾವು, ನಮ್ಮೊಳಗೆ ತಾವು ಅದು ಇಲ್ಲವಣ್ಣ ದೂರಾ.”
ಅನಂತ ದೂರದಲ್ಲಿರುವ ಆಕಾಶದ ಬಣ್ಣ ನೀಲಿ. ಈ ಸಮುದ್ರದ ತೀರಗಳ ಬಣ್ಣವೂ ನೀಲಿಯೇ. ಯಾಕೆಂದರೆ ದೈವಿಭಾವದ ಈ ಸಮುದ್ರವೂ ಸಹ ಅನಂತವಾಗಿದೆ. ಇದರ ತೀರವು ‘ತೀರ’ದಂತಹದು, ಇದಕ್ಕೆ ಅಂತವಿಲ್ಲ.
ಈ ಸಮುದ್ರದಲ್ಲಿ ಏಳುವ ಸತ್-ಭಾವನೆಯ ತೆರೆಗಳು ಎಂತಹವು? ಅವು ಮಿಂಚಿನ ಬಳಗ!
ಮಿಂಚು ಪ್ರಕಾಶಮಾನವಾಗಿರುತ್ತದೆ. ಅದರ ಕಣ್ಣು ಕೋರೈಸುವ ಬೆಳಕು ಕ್ಷಣಾರ್ಧದಲ್ಲಿ ಮಾಯವಾಗುತ್ತದೆ. ಆದರೆ ಕೊನೆಯಿಲ್ಲದ ಮಿಂಚಿನ ಬಳಗ? ಅದು ಅಪೂರ್ವ ಸಿದ್ಧಿಯ ಮಾನಸಿಕ ಸ್ಥಿತಿಯಾಗಿದೆ.
[ಶಂಕರಾಚಾರ್ಯರು ತಮ್ಮ ‘ಸೌಂದರ್ಯಲಹರಿ’ಯಲ್ಲಿ ತಪಸ್ವಿಗಳು ದೇವಿಯು ಕಾಣುವ ಬಗೆಯನ್ನೂ ಇದೇ ರೀತಿಯಾಗಿ ಬಣ್ಣಿಸಿದ್ದಾರೆ.
“ ತಟಿಲ್ಲೇಖಾ ತನ್ವೀಂ, ತಪನಶಶಿವೈಶ್ವಾನರಮಯೀಮ್
ನಿಷಣ್ಣಾಂ ಷಣ್ಣಾಂ ಅಪ್ಯುಪರಿ ಕಮಲಾನಾಂ ತವ ಕಲಾಮ್
ಮಹಾಪದ್ಮಾಟವ್ಯಾಂ ಮೃದಿತಮಲಮಾಯೇನ ಮನಸಾ
ಮಹಾಂತಃ ಪಶ್ಯಂತಃ ದಧತಿ ಪರಮಾಹ್ಲಾದ ಲಹರೀಮ್ .”
(ಹೇ ದೇವಿ, ಷಟ್ಚಕ್ರಗಳ ಮೇಲಿರುವ ಸಹಸ್ರದಳಕಮಲದಲ್ಲಿರುವ , ಮಿಂಚಿನ ಬಳ್ಳಿಯಂತಹ ರೂಪವುಳ್ಳ, ಸೂರ್ಯ, ಚಂದ್ರ ಹಾಗು ಅಗ್ನಿ ಸ್ವರೂಪಳಾದ ನಿನ್ನನ್ನು ವಿಮಲ ಮನಸ್ಸಿನ ತಪಸ್ವಿಗಳು ನೋಡುತ್ತಾರೆ.)]
ಅನೇಕ ಸಾಧಕರ ಅನುಭಾವ ಕವನಗಳು ವೈಯಕ್ತಿಕವಾಗಿರುವದನ್ನು ನೋಡುತ್ತೇವೆ. ಆದರೆ ಬೇಂದ್ರೆಯವರ ಈ ‘ಹೃದಯಸಮುದ್ರ’ವು ವೈಯುಕ್ತಿಕ ಸ್ವರೂಪದ್ದಾಗಿರದೆ ಸಾಮುದಾಯಕ ರೂಪವನ್ನು ಪಡೆದಿದೆ. ಅಂತೆಯೇ ಈ ತಮ್ಮ ಮಾನಸಸಮುದ್ರದಲ್ಲಿ ಅವರು ಎಲ್ಲ ಸಹಯಾತ್ರಿಕರ ನೆಲೆಗಳನ್ನು ಕಾಣುತ್ತಾರೆ.
“ ಅದು ನಮ್ಮ ಊರು, ಇದು ನಿಮ್ಮ ಊರು, ತಂತಮ್ಮ ಊರೊ ಧೀರಾ.

ಊರಿದರೆ ಮಾತ್ರ ಊರು ಸಿಗುವದು. ಊರುವದು ಧೀರನಿಗೇ ಸಾಧ್ಯ. ಧೀರನೆಂದರೆ ಸಾಧಕನೇ ಸೈ. ಎಲ್ಲಾ ಸಾಧಕರ ಮಾನಸಸಮುದ್ರ ಒಂದೇ. ಅದು ಭಗವಂತನು ವಾಸಿಸುವ ಹಾಲ್ಗಡಲು.
ಈ ಹಾಲ್ಗಡಲ ವಾಸವನ್ನು ನೆನಸಿಕೊಂಡೇ ಪುರಂದರದಾಸರು ಹಾಡಿದರಲ್ಲವೆ?
“ಅಲ್ಲಿರುವದು ನಮ್ಮ ಮನೆ, ಇಲ್ಲಿರುವದು ಸುಮ್ಮನೆ!”
ಅಂತಹ ಹೃದಯಸಮುದ್ರದಲ್ಲಿ ‘ನಾವು’ ಅಂದರೆ ಸಾಧಕರು ಇದ್ದೇವೆ ; ನಮ್ಮೊಳಗೆ ‘ತಾವು’ ಅಂದರೆ ಭಗವಂತ ಇದ್ದಾನೆ. ಬೇಂದ್ರೆಯವರ ಅನೇಕಾರ್ಥ ಪದ ಬಳಕೆ ಇಲ್ಲಿಯೂ ಕಾಣುತ್ತದೆ. ‘ನಾವು’ ಪದದ ಮತ್ತೊಂದು ಅರ್ಥ
ದೋಣಿ ; ‘ತಾವು’ ಅಂದರೆ ಠಾವು, ಅಂದರೆ.ಬಂದರು; ‘ಅದು ಇಲ್ಲವಣ್ಣ ದೂರಾ.’ ಯಾಕೆಂದರೆ ಸಮುದ್ರ, ದೋಣಿ ಹಾಗು ಬಂದರು ಎಲ್ಲವೂ ಸಾಧಕನ ಹೃದಯದಲ್ಲಿಯೇ ಇವೆ. ಆದುದರಿಂದ ನೀಲ ಕ್ಷಿತಿಜದಷ್ಟು ದೂರವಾಗಿ ಕಾಣುವ ಈ ತೀರ ಸಾಧಕನಿಗೆ ದೂರವಲ್ಲ ಎಂದು ಬೇಂದ್ರೆ ಹೇಳುತ್ತಾರೆ. ಇದೇ ಅರ್ಥವನ್ನು ಪುರಂದರದಾಸರೂ ಸಹ ತಮ್ಮ ಹಾಡಿನಲ್ಲಿ ಹೇಳಿದ್ದಾರೆ: “ಒಂದೇ ಕೂಗಳತೆ ಕಾಣೊ ವೈಕುಂಠಕೆ”.
ಇಂತಹ ಮಾನಸಸಮುದ್ರದಲ್ಲಿರುವ ಸಾಧಕನ ಮುಂದಿನ ಘಟ್ಟವೇನು ಎನ್ನುವದನ್ನು ಕವನದ ಎರಡನೆಯ ನುಡಿಯಲ್ಲಿ ಬೇಂದ್ರೆ ಈ ರೀತಿಯಾಗಿ ವರ್ಣಿಸಿದ್ದಾರೆ:
“ಕರೆ ಬಂದಿತಣ್ಣ, ತೆರೆ ಬಂದಿತಣ್ಣ, ನೆರೆ ಬಂದಿತಣ್ಣ ಬಳಿಗೆ,

ಅಂಬಿಗನು ಬಂದ, ನಂಬಿಗನು ಬಂದ ಬಂದsದ ದಿವ್ಯಗಳಿಗೆ.”
ಇದು ದಿವ್ಯಗಳಿಗೆ ಅಂದರೆ ದೇವರು ಕರೆ ನೀಡುತ್ತಿರುವ ಗಳಿಗೆ. ಈ ಕರೆ ಎಷ್ಟು ಉತ್ಕಟವಾದದ್ದೆಂದರೆ ಇದು ಸಮುದ್ರದ ತೆರೆಗಳಂತೆ ಬಂದು ನಮ್ಮನ್ನು ತನ್ನಲ್ಲಿ ಮುಳುಗಿಸುತ್ತದೆ. ಇದು ನೆರೆ ಅಂದರೆ ಮಹಾಪೂರದಂತೆ ಬಂದು ನಮ್ಮನ್ನು ಕೊಚ್ಚಿಕೊಂಡು ಹೋಗುತ್ತದೆ. ಈ ಕರೆಯ ತೆರೆಯತ್ತ ನಮ್ಮ ಭಾವ ಹರಿಯುತ್ತದೆ.
ಬೇಂದ್ರೆಯವರ ಕ್ರಮಬದ್ಧತೆಯನ್ನು ಇಲ್ಲಿ ಗಮನಿಸಬೇಕು. ಮೊದಲು ಬರುವುದು ಸಣ್ಣ ಪ್ರಮಾಣದ ತೆರೆ. ಸಾಧಕನ ಸಾಧನೆ ಹೆಚ್ಚಿದಂತೆ ಇದು ನೆರೆಯಾಗುತ್ತದೆ. ‘ನೆರೆ’ ಎನ್ನುವ ಪದಕ್ಕೆ mature ಎನ್ನುವ ಅರ್ಥವೂ ಇದೆ.
‘ಹರಿತsದ ಭಾವ’; ನಮ್ಮ ಜೀವಭಾವವು ಈ ಕರೆಯತ್ತ, ಕರೆ ಕೊಡುವವನತ್ತ ಹರಿಯುತ್ತದೆ; ‘ಹರಿತsದ’ ಅಂದರೆ ಹರಿತವಾಗುತ್ತದೆ, sharp ಆಗುತ್ತದೆ ಎಂದೂ ಬೇಂದ್ರೆ ಹೇಳುತ್ತಾರೆ. ಭಗವಂತನ ಈ ಕರೆಯೊಳಗೆ ನಮ್ಮ ಜೀವ ಬೆರತು ಹೋಗುತ್ತದೆ. ನಮಗೆ ಸ್ವತಂತ್ರ ಆತ್ಮಭಾವ ಉಳಿಯುವದೇ ಇಲ್ಲ. ನಮ್ಮ ಆತ್ಮಗಳಿಗೆಲ್ಲ ಇದೇ ಸಮಯ, ದೇವಚೈತನ್ಯದಲ್ಲಿ ಬೆರೆತುಹೋಗಬೇಕಾದ ಸಮಯ. ‘ಆತ್ಮಗಳಿಗೆ’ ಎಂದರೆ ಆತ್ಮದ ‘ಗಳಿಗೆ’ ( Devine Moment) ಎಂದೂ ಅರ್ಥೈಸಬಹುದು. ಇನ್ನು ನಾವು ಈ ಪ್ರಕ್ರಿಯೆಯಲ್ಲಿ ಸಂಶಯ ಪಡುವ ಕಾರಣವೇ ಇಲ್ಲ. ಯಾಕೆಂದರೆ ಈ ಪ್ರಕ್ರಿಯೆಯ ಕಾರಣಪುರುಷನು ನಮ್ಮನ್ನು ಸಾಗರ ದಾಟಿಸುವ ಅಂಬಿಗನಾಗಿದ್ದಾನೆ. ಅವನು ನಾವು ನಂಬಬಹುದಾದ, ನಂಬಲೇಬೇಕಾದ ನಂಬಿಗ.
ದಾಸರು ಹೇಳುವಂತೆ: “ಅಂಬಿಗ, ನಾ ನಿನ್ನ ನಂಬಿದೆ; ಜಗದಂಬಾರಮಣ ನಿನ್ನ ನಂಬಿದೆ.”
ಮೂರನೆಯ ನುಡಿಯಲ್ಲಿ ಬೇಂದ್ರೆ ಈ ಸಮುದ್ರವು ಲೌಕಿಕ ಸಾಗರವಲ್ಲ, ಅಲೌಕಿಕ ಸಾಗರ ; ಅರ್ಥಾತ್ ಕ್ಷುದ್ರ ಭಾವನೆಗಳ ಸಾಗರವಲ್ಲ , ದೈವೀ ಭಾವನೆಗಳ ಸಾಗರ ಎನ್ನುವದನ್ನು ಸ್ಪಷ್ಟಪಡಿಸುತ್ತಾರೆ.
“ಇದು ಉಪ್ಪು ನೀರ ಕಡಲಲ್ಲೊ ; ನಮ್ಮ ಒಡಲಲ್ಲೆ ಇದರ ನೆಲೆಯು.

ಕಣ್ಣರಳಿದಾಗ ಕಣ್ ಹೊರಳಿದಾಗ ಹೊಳೆಯುವದು ಇದರ ಕಳೆಯು.”
ಉಪ್ಪನೀರ ಕಡಲು ಅಂದರೆ ಪ್ರಾಪಂಚಿಕ ಕಡಲು. ಈ ಕಡಲು ಪ್ರಾಪಂಚಿಕವಲ್ಲ, ನಮ್ಮ ಒಡಲು ಅಂದರೆ ನಮ್ಮ ಅಂತಃಕರಣದಲ್ಲಿಯೇ ಈ ಕಡಲಿನ ನೆಲೆ ಇದೆ. ಈ ನೆಲೆಯೇ ಈ ಕಡಲಿನ ಸೆಲೆಯು. ಕಂಡಕಂಡವರಿಗೆ ಇದರ ಬೆಲೆ ಗೊತ್ತಾಗದು. ಒಳಗಣ್ಣಿನಿಂದ ಕಂಡವರಿಗಷ್ಟೇ ಇದರ ಮೌಲ್ಯದ ಅರಿವಾಗುವದು. ಸಿಕ್ಕಸಿಕ್ಕಲ್ಲಿ ಈ ಸೆಲೆ ಒಡೆಯಲಾರದು. ಸಾಧನೆಯಿಂದ ಪವಿತ್ರಗೊಂಡ ತಾಣದಲ್ಲಿ ಮಾತ್ರ ಈ ಸೆಲೆ ಚಿಮ್ಮುವದು. ಯಾಕೆಂದರೆ ಇದು ತೀರ್ಥಕ್ಷೇತ್ರವಿದ್ದಂತೆ. ಇದರ ಕಾಂತಿ ನಮಗೆ ಹೊಳೆಯಬೇಕಾದರೆ ನಮ್ಮ ಕಣ್ಣು ಅರಳಿರಬೇಕು. ಈ ಅರಳಿದ ಕಣ್ಣು ಈ ದಿವ್ಯತೀರ್ಥದ ಕಡೆಗೆ ಹೊರಳಬೇಕು. ಆಗ ಮಾತ್ರ ದಿವ್ಯಪ್ರಭೆಯ ಈ ಕಾರಂಜಿ ನಮ್ಮ ಕಣ್ಣಿಗೆ ಹೊಳೆಯುವದು.
ಈ ಸಾಕ್ಷಾತ್ಕಾರವು ಕವಿಯನ್ನು ಆನಂದದಿಂದ ತುಂಬಿದೆ. ಅಂತೆಲೇ ಆತ ಉದ್ಘೋಷಿಸುತ್ತಿದ್ದಾನೆ:
“ಬಂದವರ ಬಳಿಗೆ ಬಂದsದ ಮತ್ತು ನಿಂದವರ ನೆರೆಗು
ಬಂದsದೋ ಬಂದsದ,
ನವಮನುವು ಬಂದ ಹೊಸ ದ್ವೀಪಗಳಿಗೆ ಹೊರಟಾನ ಬನ್ನಿ
ಅಂದsದೋ ಅಂದsದ.”
‘ಯಾರು ಬಂದಿದ್ದಾರೆಯೋ, ಅಂದರೆ ದಿವ್ಯಕರೆಯನ್ನು ಕೇಳಿ ಬಂದಿದ್ದಾರೆಯೊ’ ಅವರ ಬಳಿಗೆ ಈ ಮಹಾಪ್ರವಾಹ ಬಂದಿದೆ. ಯಾರು ಇಲ್ಲಿ ಬಂದು ನಿಂತಿದ್ದಾರೊ ಅವರ ಪಕ್ಕದಲ್ಲಿಯೆ(=ನೆರೆಗು) ಬಂದಿದೆ. ಅವರ ನೆರೆಗೆ (ಅಂದರೆ ಅವರನ್ನು ಪಕ್ವಗೊಳಿಸುವ ಸಲುವಾಗಿ) ನಿಂತುಕೊಂಡಿದೆ. ನಿಂದವರ ನೆರೆಗೆ ಅನ್ನುವದಕ್ಕೆ ಮತ್ತೊಂದು ಅರ್ಥವನ್ನು ಹೇಳಬಹುದು. ಯಾರು ಬಾರದೆ ಅಲ್ಲಿಯೇ ನಿಂತಿದ್ದಾರೆಯೋ ಅವರ ಪಕ್ಕಕ್ಕೂ ಸಹ ಈ ನೆರೆ ಬಂದು ನಿಂತಿದೆ.
ಈ ‘ಕರೆ’ ಸಾಧಕನಿಗೆ ಏನು ಹೇಳುತ್ತಿದೆ?
“ನವಮನುವು ಬಂದ ಹೊಸ ದ್ವೀಪಗಳಿಗೆ ಹೊರಟಾನ ಬನ್ನಿ
ಅಂದsದೋ ಅಂದsದ.”
‘ನವಮನುವು ಬಂದಿರುವನು’ ಎನ್ನುವ ಈ ಘೋಷಣೆ ಶ್ರೀ ಅರವಿಂದರ ಕಾಣ್ಕೆಯ ವಿವರಣೆ.
ಅರವಿಂದರು ಮಾನವನ ಉತ್ಕ್ರಾಂತಿಯಲ್ಲಿ ನಂಬಿಗೆ ಇಟ್ಟವರು. ಮನುಷ್ಯನು ತನ್ನ ಕೆಳಮಟ್ಟದ ಮಾನಸಿಕ ಸ್ಥಿತಿಯಿಂದ ಮೇಲೆದ್ದು ಸುಪ್ರಮಾನಸ (supra mental, super mind) ಸ್ಥಿತಿಯನ್ನು ತಲುಪಬೇಕು, ತಲುಪಿಯೇ ತೀರುತ್ತಾನೆ ಎನ್ನುವದು ಅವರ ಕಾಣ್ಕೆ. ಬೇಂದ್ರೆಯವರು ಅದನ್ನೇ ನವಮನುವಿನ ರೂಪಕದ ಮೂಲಕ ಹೇಳುತ್ತಿದ್ದಾರೆ.
ಶ್ರೀ ಅರವಿಂದರನ್ನು ಮಾನಸಿಕವಾಗಿ ತಮ್ಮ ಗುರುವಾಗಿ ಸ್ವೀಕರಿಸಿದ ಬೇಂದ್ರೆಯವರು, ಶಿಷ್ಯರ ಸಾಧನೆ ಹಾಗು ಗುರುವಿನ ಅನುಗ್ರಹವನ್ನು ‘ಹೃದಯಸಮುದ್ರ’ ಕವನದ ಮೂಲಕ ಚಿತ್ರಿಸಿದ್ದಾರೆ.
“ಹೃದಯಸಮುದ್ರ” ಕವನದಲ್ಲಿ ಬೇಂದ್ರೆಯವರ ವೈಶಿಷ್ಟ್ಯವಾದ ಅನೇಕಾರ್ಥ ಪದಗಳಿವೆ. ಅವರ ಎಲ್ಲ ಕವನಗಳಲ್ಲಿರುವ ಕ್ರಮಬದ್ಧತೆ, ವಾಸ್ತವಿಕ ನಿರೂಪಣೆ ಇಲ್ಲಿಯೂ ಇದೆ. ಆದರೂ ಸಹ ಓದುಗನ ಹೃದಯಕ್ಕೆ ತಟ್ಟುವಂತೆ ಸಾಧಕನ ಮನಃಸ್ಥಿತಿಯನ್ನು ಬಿಂಬಿಸುವದರಲ್ಲಿ ಕವನ ಸೋತಿದೆ ಎನ್ನಬಹುದು.
ಕನ್ನಡದ ಬೇರೆ ಕೆಲವು ಅನುಭಾವ ಗೀತೆಗಳು ಎಷ್ಟು ಸಮರ್ಥವಾಗಿ ಈ ಕಾರ್ಯವನ್ನು ಮಾಡಿವೆ ಎನ್ನುವದಕ್ಕೆ ಕೆಲವು ಉದಾಹರಣೆಗಳನ್ನು ಕೊಡಬಹುದು:
(೧) ಮಧುರಚೆನ್ನರು ಸಾಧಕನ ಹಂಬಲವನ್ನು ಹೀಗೆ ವರ್ಣಿಸುತ್ತಾರೆ:
“ ನಿಲ್ಲು ನಿಲ್ಲೆಲೆ ನವಿಲೆ, ನಿನ್ನ ಕಣ್ಣುಗಳೇಸು
ಕಣ್ಣ ಬಣ್ಣಗಳೇಸು ಎಣಿಸಲಾರೆ!
ಎಲ್ಲ ರೂಪಿಸಿದವನು ಎಲ್ಲಿ ತಾನಡಗಿದನೆ,
ತಾಳಲಾರದು ಜೀವ, ಹೇಳಬಾರೆ!”
(೨) ಅಕ್ಕ ಮಹಾದೇವಿಯ ವಚನವಂತೂ ಪ್ರಸಿದ್ಧವಿದೆ.
ಈ ವಚನದಲ್ಲಿ ಸಾಕ್ಷಾತ್ಕಾರ ಪಡೆದ ಸಾಧಕನ ಚಿತ್ರವಿದೆ:
“ ಅಕ್ಕ ಕೇಳವ್ವ, ನಾನೊಂದ ಕನಸ ಕಂಡೆ
ಅಕ್ಕ ಅಡಕೆ ಓಲೆ ತೆಂಗಿನಕಾಯಿ ಕಂಡೆ
ಚಿಕ್ಕ ಚಿಕ್ಕ ಜಡೆಗಳ ಸುಲಿಪಲ್ಲ ಗೊರವನು……”
ಇದರ ಕಾರಣ ಸ್ಪಷ್ಟ. ಅನುಭಾವದ ಸಾಕ್ಷಾತ್ ಅನುಭವವಿಲ್ಲದೆ, ಅನುಭಾವ-ಕವನ ರಚಿಸಲಾಗದು. ಬೇಂದ್ರೆಯವರ ಮಾತಿನಲ್ಲಿಯೇ ಹೇಳುವದಾದರೆ:
“ ಕಟ್ಟೋರೆಲ್ಲ ಕವಿಗಳಲ್ಲಾ, ಹುಟ್ಟೋರೆಲ್ಲಾ ಭವಿಗಳಲ್ಲಾ,

ಕರು ಕೂಡ ಕಟ್ಟಿದ್ದುಂಟು,
ಬಸವಣ್ಣನೂ ಹುಟ್ಟಿದ್ದುಂಟು.”